ಪೊಲೀಸರ ವರ್ಗಾವಣೆ ಇಲ್ಲ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 9, Aug 2018, 8:38 AM IST
Local Body Election No Transfer For Police officer
Highlights

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸ್ಥಳಗಳಲ್ಲಿ ಯಾವುದೇ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆಗೊಳಿಸದಂತೆ ರಾಜ್ಯ ಚುನಾವಣಾ  ಆಯೋಗವು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ. 
 

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸ್ಥಳಗಳಲ್ಲಿ ಯಾವುದೇ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆಗೊಳಿಸದಂತೆ ರಾಜ್ಯ ಚುನಾವಣಾ  ಆಯೋಗವು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ. 

ಅಲ್ಲದೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸೂಕ್ತ ಬಂದೋಬಸ್ತ್ ಒದಗಿಸುವಂತೆಯೂ ನಿರ್ದೇಶನ ನೀಡಿದೆ. 

ಬುಧವಾರ ಪತ್ರ ಬರೆದಿರುವ ಆಯೋಗವು, ಆ. 29 ರಂದು ರಾಜ್ಯದ  105 ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದ ಚುನಾವಣೆ  ನಡೆ ಯಲಿದೆ. ಚುನಾವಣಾ ಕಾರ್ಯಗಳಿಗೆ ಅಧಿಕಾರಿ ಗಳನ್ನು ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಚುನಾವಣಾ ನಡೆವ ಸ್ಥಳಗಳಲ್ಲಿ ಯಾವುದೇ ಅಧಿಕಾರಿಗಳನ್ನು ವರ್ಗ ಮಾಡಬಾ ರದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

loader