ಹುಬ್ಬಳ್ಳಿ: ಜನತೆ ಅಪೇಕ್ಷೆ ಪಟ್ಟರೆ, ಹೈಕಮಾಂಡ್‌ ತೀರ್ಮಾನ ಕೈಗೊಂಡರೆ ಬೀದರ್‌ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದೊಮ್ಮೆ ಹೈಕಮಾಂಡ್‌ ಟಿಕೆಟ್‌ ನೀಡಿದರೆ ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದರು.

ಮಾ.11ರಂದು ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್‌ ಕಮಿಟಿ ಸಭೆ ಇದೆ. ಅದರಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಧಾರವಾಡ ಮತ್ತು ಹಾವೇರಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡುವ ವಿಷಯವಾಗಿ ಈಗಾಗಲೇ ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿನಮ್ಮ ಬಳಿ ಇದೆ. 

ಸ್ಕ್ರೀನಿಂಗ್‌ ಕಮಿಟಿ ಮೀಟಿಂಗ್‌ನಲ್ಲಿ ಚರ್ಚೆಯಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಕುದುರೆಗೆ ನಾವು ಟಿಕೆಟ್‌ ನೀಡುತ್ತೇವೆ ಎಂದು ಹೇಳಿದರು.