ಲೋಕಸಭಾ ಚುನಾವಣೆ : ಇವರಿಗೆಲ್ಲಾ ಕಾಂಗ್ರೆಸ್ ಟಿಕೆಟ್ ಇಲ್ಲ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 9, Feb 2019, 11:20 AM IST
Lok Sabha Election Congress will give importance for New Faces
Highlights

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸುತ್ತಿವೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋತವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದ್ದಾರೆ. 

ನವದೆಹಲಿ: 2019 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿವೆ. 

ಅಲ್ಲದೇ ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಕೂಡ ಹೆಚ್ಚು ಮುತುವರ್ಜಿ ವಹಿಸಲಾಗುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ನಿಟ್ಟಿನಲ್ಲಿ ಹೆಚ್ಚಿನ ಆಸ್ತೆ ವಹಿಸುತ್ತಿದ್ದಾರೆ. 

 ದೆಹಲಿ ಅಧಿಕಾರದ ಗದ್ದುಗೆಗೇರಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ‘ಅಭ್ಯರ್ಥಿಗಳ ಆಯ್ಕೆ ವೇಳೆ 2 - 3 ಬಾರಿ ಸೋತವರ ಬದಲಿಗೆ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ,’ ಸಲಹೆ ನೀಡಿದರು.

loader