ಹೈಕಮಾಂಡ್‌ ನಿರ್ಧಾರದಂತೆ ಎಲ್ಲವೂ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹೊಂದಾಣಿಕೆಯನ್ನು ಹೈಕಮಾಂಡ್‌ ಅಂತಿಮಗೊಳಿಸಲಿದೆ. ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳೂ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿವೆ ಎಂದು ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಶಿರಸಿ: ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಬದಲಾವಣೆ ಆದರೂ ತೊಂದರೆ ಇಲ್ಲ. ಬಹಳ ಇನ್ನಿಂಗ್ಸ್‌ ಆಡಿದ್ದೇನೆ. ಇನ್ನೂ ಆಡಬೇಕೆಂಬ ಆಸಕ್ತಿ ಇಲ್ಲ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಮಾರ್ಮಿಕವಾಗಿ ಹೇಳಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೈಕಮಾಂಡ್‌ ನಿರ್ಧಾರದಂತೆ ಎಲ್ಲವೂ ನಡೆಯಲಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹೊಂದಾಣಿಕೆಯನ್ನು ಹೈಕಮಾಂಡ್‌ ಅಂತಿಮಗೊಳಿಸಲಿದೆ. ಉಪ ಚುನಾವಣೆಯಲ್ಲಿ ಉಭಯ ಪಕ್ಷಗಳೂ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿವೆ ಎಂದು ಹೇಳಿದರು. 

ಎಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಇದೆಯೋ ಅಲ್ಲಿ ಕಾಂಗ್ರೆಸ್‌ಗೆ ಟಿಕೆಟ್‌ ಸಿಗಲಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಒಳಗೆ ವಿವಾದ, ಗೊಂದಲ ಇಲ್ಲ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಇಡಬಹುದು. ಆದರೆ, ಅಲ್ಲಿ ಒಮ್ಮತದ ಮೇಲೆ ಪಡೆಯುವ ತೀರ್ಮಾನಕ್ಕೆ ಬದ್ಧವಾಗಿರಬೇಕು. ಡಿ.ಕೆ.ಶಿವಕುಮಾರ್‌ ಅವರು ಕೂಡ ಲಿಂಗಾಯತರಿಗೆ ಸಂಬಂಧಿಸಿದ ವಿಷಯ ಪ್ರಸ್ತಾಪಿಸಿದ್ದಾರೆ. ಅದು ಇತ್ಯರ್ಥ ಆಗಬೇಕಾದ ಸಂಗತಿ ಎಂದರು.