ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ವಿವಿಧ ಪಕ್ಷಗಳಲ್ಲಿ ರಾಜಕೀಯ ಕಸರತ್ತು ಜೋರಾಗಿದೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆಯೂ ಸಾಕಷ್ಟು ಚರ್ಚೆ ನಡೆಸಲಾಗುತ್ತಿದೆ. ಬಿಜೆಪಿಯಿಂದ ಈಗಾಗಲೇ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ನಡೆದಿದೆ ಎನ್ನಲಾಗುತ್ತಿದೆ. 

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಚುನಾವಣೆ ಕಸರತ್ತು ಚುರುಕುಗೊಂಡಿದೆ. 

ಸದ್ಯ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಅಭ್ಯರ್ಥಿಯಾಗಿ ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ಎಂ ರುದ್ರೇಶ್ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : ರಮೇಶ್‌ ಎಲ್ಲಿದ್ದಾರೆ : ಬಿಎಸ್‌ವೈಗೆ ಗೊತ್ತು..?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು, ಈ ವೇಳೆ ಬೆಂಗಳೂರು‌ ಗ್ರಾಮಾಂತರ ಲೋಕಸಭೆ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ಜಿಲ್ಲಾಧ್ಯಕ್ಷ ಎಂ ರುದ್ರೇಶ್ ಹೆಸರು ಪ್ರಸ್ತಾಪಿಸಲಾಗಿತ್ತು. 

ಇದನ್ನು ಓದಿ : ರಮೇಶ್ ಬಿಜೆಪಿ ಸೇರಲು ಯತ್ನಿಸುತ್ತಿದ್ದರೂ ಕೈ ನಾಯಕರು ನಿರಾಳವೇಕೆ?

ಸಿ.ಪಿ.ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸದ‌ ಕಾರಣ ಎಂ.ರುದ್ರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೇ ಈಗಿನಿಂದಲೇ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. 

ಎಂಟು ಜಿಲ್ಲೆಯ ಜಿಲ್ಲಾಧ್ಯಕ್ಷರು ಸೇರಿ ಒಮ್ಮತದಿಂದ ಎಂ.ರುದ್ರೇಶ್ ಆಯ್ಕೆ ಮಾಡಿದ್ದಾರೆ. ರುದ್ರೇಶ್ ಆಯ್ಕೆ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ.