ಲೋಕಸಭಾ ಚುನಾವಣೆಗೆ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ಸ್ಪಷ್ಪನೆ ನೀಡಿದ್ದು ಚಿಕ್ಕಮಗಳೂರು ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು: ಸಂಸದೆ ಶೋಭಾ ಕರಂದ್ಲಾಜೆ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಇಲ್ಲವಾ ಎನ್ನುವ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ಶೋಭಾ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ.
ನಗರ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಈಗ ಆಯ್ಕೆಯಾಗಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಚುನಾವಣೆಗೆ ಸ್ಪರ್ಧೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
