ಬೆಂಗಳೂರು :  ಲೋಕಸಭೆ ಚುನಾವಣೆಗೆ ಬಾಗಲಕೋಟೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲಾ ಮುಖಂಡರೊಂದಿಗೆ ಸಭೆ ನಡೆಸಿದ್ದು, ನಾಲ್ಕು ಮಂದಿ ಸಂಭಾವ್ಯರ ಪಟ್ಟಿಸಿದ್ಧಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಅಭಿಪ್ರಾಯ ಕ್ರೋಡೀಕರಿಸಿದ ಬಳಿಕ ವೀಣಾ ಕಾಶಪ್ಪನವರ್‌, ಬಾಯಕ್ಕ ಮೇಟಿ, ಮಹಂತೇಶ್‌ ಉದುಪುಡಿ, ನಂಜಯ್ಯನ ಮಠ ಬಗ್ಗೆ ಹೆಚ್ಚಿನ ನಾಯಕರು ಒಲವು ತೋರಿದ್ದರಿಂದ ಈ ನಾಲ್ಕು ಮಂದಿ ಸಂಭಾವ್ಯರ ಪಟ್ಟಿಸಿದ್ಧಪಡಿಸಿಲಾಗಿದೆ. ಅಂತಿಮವಾಗಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಮೂವರ ಹೆಸರನ್ನು ಕೆಪಿಸಿಸಿಗೆ ಕಳುಹಿಸಲಾಗುವುದು. ಕೆಪಿಸಿಸಿಯು ಈ ಪಟ್ಟಿಯನ್ನು ದೆಹಲಿಯಲ್ಲಿ ನಡೆಯಲಿರುವ ಚುನಾವಣಾ ಪರಿಶೀಲನಾ ಸಮಿತಿಗೆ ಕಳುಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ಬಾಗಲಕೋಟೆಯಿಂದ ಕೈ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವು ಮಂದಿ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಶುಕ್ರವಾರದ ಸಭೆಯಲ್ಲಿ ಒಟ್ಟು 12 ಮಂದಿ ಆಕಾಂಕ್ಷಿಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ಕೊನೆಗೆ 4 ಹೆಸರುಗಳು ಅಂತಿಮಗೊಂಡವೆಂದು ತಿಳಿದುಬಂದಿದೆ.