ವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು| ಮಹತ್ವದ ತಿದ್ದುಪಡಿ ವಿದೇಯಕಕ್ಕೆ ಅನುಮೋದನೆ| ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ| 2014ರ ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶ| ಮಸೂದೆ ವಿರೋಧಿಸಿದ ಕಾಂಗ್ರೆಸ್, ಸಿಪಿಎಂ, ಶಿವಸೇನೆ, ಜೆಡಿಯು| ಮುಸ್ಲಿಮೇತರ ವಿದೇಶಿಯರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶ
ನವದೆಹಲಿ(ಜ.08): ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸಾಗಿದೆ. ಈ ಹೊಸ ಕಾನೂನಿನ ಪ್ರಕಾರ ಇನ್ನು ಮುಂದೆ ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ದೊರಕಲಿದೆ.
ಇದು 2014ರ ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶವಾಗಿತ್ತು. ಆದರೆ ಕಾಂಗ್ರೆಸ್, ಸಿಪಿಎಂ, ತೃಣಮೂಲ ಕಾಂಗ್ರೆಸ್ ಹಾಗೂ ಇತರ ಕೆಲವು ಪಕ್ಷಗಳು ಈ ವಿಧೇಯಕ ವಿರೋಧಿಸಿವೆ. ವಿಚಿತ್ರವೆಂದರೆ ಎನ್‌ಡಿಎ ಪಾಲುದಾರರಾದ ಶಿವಸೇನಾ ಹಾಗೂ ಜೆಡಿಯು ಕೂಡ ಈ ವಿಧೇಯಕ ವಿರೋಧಿಸಿದವು.
ಪ್ರಮುಖವಾಗಿ ಅಸ್ಸಾಂ ಸರ್ಕಾರದಲ್ಲಿ ಬಿಜೆಪಿಯ ಪ್ರಮುಖ ಪಾಲುದಾರ ಪಕ್ಷವಾಗಿದ್ದ ಅಸ್ಸೋಂ ಗಣ ಪರಿಷತ್ ಬಿಜೆಪಿಯೊಂದಿಗೆ ಈಗಾಗಲೇ ಮೈತ್ರಿ ಕಡಿದುಕೊಂಡಿದೆ.
1955ರ ಭಾರತೀಯ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದು ಆಷ್ಘಾನಿಸ್ತಾನ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಹಾಗೂ ಕ್ರೈಸ್ತರಿಗೆ ಭಾರತೀಯ ನಾಗರಿಕತ್ವ ದೊರಕಿಸುವುದೇ ವಿಧೇಯಕದ ಉದ್ದೇಶ. ಯಾವುದೇ ದಾಖಲೆ ಹೊಂದಿರದೇ ಇದ್ದರೂ ಇವರು 6 ವರ್ಷ ಭಾರತದಲ್ಲಿ ನೆಲೆಸಿದ್ದರೆ ಅಂತವರಿಗೆ ಭಾರತೀಯ ಪೌರತ್ವ ಸಿಗಲಿದೆ.
ಪಾಕ್, ಬಾಂಗ್ಲಾ, ಆಫ್ಘನ್‌ನ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ
ಪೌರತ್ವ ಕಾಯ್ದೆ ಅಂಗೀಕಾರ ಮಾಡದಿದ್ದಲ್ಲಿ 5 ವರ್ಷದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು
