ನವದೆಹಲಿ :  ದೇಶದಲ್ಲಿ ಲೋಕಸಭಾ ಚುನಾವಣೆ ಮುಂದಿನ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದ್ದಾರೆ. 

ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ವಿವಿಧ ವಿಚಾರಗಳ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ.  ಕಾಂಗ್ರೆಸ್ - ಜೆಡಿಎಸ್ ನಡುವಿನ ಸೀಟು ಹಂಚಿಕೆ ಬಗ್ಗೆಯೂ ಮಾತನಾಡಿದ ಅವರು ಈ ಬಗ್ಗೆ ಇನ್ನೂ ಕೂಡ ಯಾವುದೇ ತೀರ್ಮಾನವಾಗಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕವಷ್ಟೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. 

ನವೆಂಬರ್ - ಡಿಸೆಂಬರ್ ನಲ್ಲೇ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಿದ್ದುದರಿಂದ ಮುಂಗಾರು ಅಧಿವೇಶನವೇ ಕೊನೆಯ ಸಂಸತ್ ಅಧಿವೇಶನ ಆಗಬಹುದಾಗಿದೆ ಎಂದೂ ದೇವೇಗೌಡ ಅವರು ಹೇಳಿದ್ದಾರೆ. 

ಇನ್ನು ಇದೇ ವೇಳೆ ರಾಜ್ಯ ಬಜೆಟ್ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, ಜುಲೈ 5 ನೇ ತಾರೀಕು ಕುಮಾರಸ್ವಾಮಿ ಬಜೆಟ್ ಮಂಡಿಸುತ್ತಾರೆ. ಮೈತ್ರಿ ಸರ್ಕಾರ ಹೊಸ ಬಜೆಟ್ ಮಂಡಿಸಬೇಕೆಂದು ವೀರಪ್ಪ ಮೊಯಿಲಿ ಅವರೇ ಹೇಳಿದ್ದಾರೆ ಎಂದರು.