Asianet Suvarna News Asianet Suvarna News

ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್ ಟಿಕೆಟ್ ಯಾರಿಗೆ..?

ಮಂಡ್ಯ ಲೋಕಸಭಾ ಉಪಚುಣಾವಣಾ ಕಣವೂ ಕೂಡ ರಂಗೇರುತ್ತಿದ್ದು,  ಜೆಡಿಎಸ್ ಪಕ್ಷದ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಳವಾಗಿದೆ.  ಮಾಜಿ ಶಾಸಕ ಎಲ್ ಆರ್ ಶಿವರಾಮೇಗೌಡರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ಶಾಸಕರು ಹಾಗೂ ಮುಖಂಡರು ಒತ್ತಾಯಿಸುತ್ತಿದ್ದಾರೆ. 
 

Loksabha By Poll Who Is The JDS Candidate For Mandya
Author
Bengaluru, First Published Oct 8, 2018, 12:03 PM IST

ಮಂಡ್ಯ : ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಪ್ರಕಟವಾಗಿದ್ದು,  ವಿವಿಧ ಪಕ್ಷಗಳಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. 

ಇದೇ ವೇಳೆ ಮಂಡ್ಯ ಲೋಕಸಭಾ ಉಪಚುನಾವಣಾ ಕಣವೂ ಕೂಡ ರಂಗೇರುತ್ತಿದ್ದು,  ಜೆಡಿಎಸ್ ಪಕ್ಷದ ಟಿಕೆಟ್ ಗಾಗಿ ಪೈಪೋಟಿ ಹೆಚ್ಚಳವಾಗಿದೆ.  ಮಾಜಿ ಶಾಸಕ ಎಲ್ ಆರ್ ಶಿವರಾಮೇಗೌಡರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ಶಾಸಕರು ಹಾಗೂ ಮುಖಂಡರು ಒತ್ತಾಯಿಸುತ್ತಿದ್ದಾರೆ. 

ಸಾಮಾಜಿಕ‌ ಜಾಲತಾಣಗಳಲ್ಲಿ ಶಿವರಾಮೇಗೌಡರನ್ನೇ ಅಭ್ಯರ್ಥಿ ಮಾಡುವಂತೆ ಚರ್ಚೆ ನಡೆಯುತ್ತಿದ್ದು,  ನಿವೃತ್ತ ಐ ಆರ್ ಎಸ್ ಅಧಿಕಾರಿ ಲಕ್ಷ್ಮೀ ಅಶ್ವಿನ್ ಗೌಡ ಹಾಗೂ ಸಂತೋಷ್ ತಮ್ಮಣ್ಣ ಕೂಡ ಆಕಾಂಕ್ಷಿಗಳಾಗಿದ್ದಾರೆ. 

ಇನ್ನು ಆಕಾಂಕ್ಷಿತರ  ಪೈಕಿ ಎಲ್ ಆರ್ ಶಿವರಾಮೇಗೌಡ ಅವರು ಹೆಚ್ಚು ಪ್ರಬಲ ಅಭ್ಯರ್ಥಿಯಾಗಿದ್ದು, ಕಳೆದ ಚುನಾವಣೆ ವೇಳೆ  ನಾಗಮಂಗಲದಲ್ಲಿ ಸುರೇಶ್ ಗೌಡರ ಗೆಲುವಿಗೆ ಶ್ರಮಿಸಿದ್ದದ್ದು, ಇದನ್ನೆ ಅಸ್ತ್ರವಾಗಿಟ್ಟುಕೊಂಡು ಇದೀಗ ಉಪಚುನಾವಣೆ ಟಿಕೆಟ್ ಗಾಗಿ ಶಿವರಾಮೇಗೌಡರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. 

Follow Us:
Download App:
  • android
  • ios