ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದರು. ನಾನು ಚಿಕ್ಕಬಳ್ಳಾಪುರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇನೆ. 

ಹಾಗೆಯೇ ಜೆಡಿಎಸ್‌ನ ಬೆಂಬಲ ಕೂಡ ಸಿಕ್ಕರೆ ನನ್ನ ಗೆಲುವು ಖಚಿತ. ಇಂತಹದ್ದರಲ್ಲಿ ನಾನು ಕ್ಷೇತ್ರ ಬದಲಾವಣೆ ಮಾಡುವ ಸಾಹಸಕ್ಕೆ ಏಕೆ ಕೈ ಹಾಕಬೇಕು ಎಂದು ಪ್ರಶ್ನಿಸಿದರು.