ಬಿಜೆಪಿಗೆ ಶಾಕ್ ಕೊಟ್ಟ ಸಂಸದೆ| ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ| ಬಿಜೆಪಿ ಸಂಸದೆಯನ್ನು ಪಕ್ಷಕ್ಕೆ ಸ್ವಾಗತಿಸಿದ ಅಧ್ಯಕ್ಷ ರಾಹುಲ್ ಗಾಂಧಿ
ಲಕ್ನೋ[ಮಾ.03]: ಲೋಕಸಭೆ ಚುನಾವಣೆಗೂ ಮೊದಲು ಬಿಜೆಪಿಗೆ ಸಂಸದೆಯೊಬ್ಬರು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಶನಿವಾರದಂದು ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಪುಲೆ ಕಾಂಗ್ರೆಸ್ ಕೈ ಹಿಡಿದಿದ್ದು, ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ದಲಿತ ನಾಯಕಿಯಾಗಿ ಗುರುತಿಸಿಕೊಂಡಿರುವ ಸಾವಿತ್ರಿ ಬಾಯಿ ಪುಲೆ ಸುಮಾರು ಒಂದು ವರ್ಷದಿಂದ ಬಿಜೆಪಿ ವಿರುದ್ಧ ಧ್ವನಿ ಎತ್ತಿರುವ ಈ ನಾಯಕಿ ಬಿಜೆಪಿಯನ್ನು 'ದಲಿತ ವಿರೋಧಿ ಪಕ್ಷ' ಎಂದೂ ಘೋಷಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದಿದ್ದ ಸಾವಿತ್ರಿ ಬಹರಾಯಿಚ್ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಕಳೆದ ವರ್ಷ ಡಿಸೆಂಬರ್ ನಲ್ಲಿ ಕಮಲ ಪಕ್ಷದ ವಿರುದ್ಧ ಧ್ವನಿ ಎತ್ತಿದ್ದ ಸಾವಿತ್ರಿ 'ಬಿಜೆಪಿ ತನ್ನನ್ನು ನಿರ್ಲಕ್ಷಿಸುತ್ತಿದೆ, ಇದು ಸಮಾಜವನ್ನು ಒಡೆದು ರಾಜಕಾರಣ ನಡೆಸುತ್ತಿದೆ' ಎಂದು ಆರೋಪಿಸಿದ್ದರು.
कांग्रेस अध्यक्ष @RahulGandhi के सानिध्य में आज सावित्री बाई फुले (सांसद, बहराइच) और राकेश सचान (पूर्व सांसद, फतेहपुर) कांग्रेस परिवार का हिस्सा बने।
— Congress (@INCIndia) March 2, 2019
उप्र महासचिव प्रियंका गांधी वाड्रा एवं ज्योतिरदित्य सिंधिया ने दोनों नेताओं का कांग्रेस परिवार में स्वागत किया। pic.twitter.com/aEldDAbe3q
ಪುಲೆ ಜೊತೆಗೆ ಸಮಾಜವಾದಿ ಪಾರ್ಟಿಯ ನಾಯಕ ಹಾಗೂ ಫತೇಪುರ್ ಕ್ಷೇತ್ರದ ಮಾಜಿ ಸಂಸದ ರಾಕೇಶ್ ಸಚಾನ್ ಕೂಡಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿರುವ ಕಾಂಗ್ರೆಸ್ ಗೆ ಈ ಇಬ್ಬರು ನಾಯಕರ ಸೇರ್ಪಡೆ ಬಹಳಷ್ಟು ಶಕ್ತಿ ನೀಡಿದೆ ಎನ್ನಲಾಗುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಹಿಂದೆ ಬಿದ್ದಿದ್ದ ಕಾಂಗ್ರೆಸ್, ಈ ಇಬ್ಬರು ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಮತ್ತೆ ಉತ್ತರ ಪ್ರದೆಶ ರಾಜ್ಯ ರಾಜಕಾರಣದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯತ್ನಿಸುತ್ತಿದೆ ಎಂಬುವುದು ಸ್ಪಷ್ಟವಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 3, 2019, 2:24 PM IST