ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ 8 ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ.

ನವದೆಹಲಿ(ಅ.08): ಡೀಸೆಲ್ ಬೆಲೆ ಇಳಿಕೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಸೋಮವಾರ (ಅ.9-10)ದಿಂದ ಎರಡು ದಿನ ಮುಷ್ಕರ ನಡೆಸಲಿದ್ದಾರೆ. ದೇಶಾದ್ಯಂತ ಒಂದೇ ದರದ ಡೀಸೆಲ್ ಸಿಗುವಂತಾಗಲು, ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಸೇರಿದಂತೆ, ಇತರ ಕೆಲವು ವಿಷಯಗಳಿಗೂ ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ), ಅಖಿಲ ಭಾರತ ಸಾಗಾಟಗಾರರ ಅಭಿವೃದ್ಧಿ ಸಂಸ್ಥೆ ಮತ್ತು ಸರಕು ವಾಹನ ಮಾಲೀಕರ ಸಂಘಗಳ ಅಖಿಲ ಭಾರತ ಒಕ್ಕೂಟ ಪತ್ರಿಕಾಗೋಷ್ಠಿ ನಡೆಸಿ, ಪ್ರತಿಭಟನೆಯ ಕುರಿತು ಘೋಷಿಸಿವೆ.

ದೇಶಾದ್ಯಂತ ಸೋಮವಾರ ಬೆಳಗ್ಗೆ 8 ಗಂಟೆಗೆ ಮತ್ತು ಮಂಗಳವಾರ ರಾತ್ರಿ 8 ಗಂಟೆಗೆ ‘ರಸ್ತೆ ತಡೆ’ ನಡೆಸಿ ಪ್ರತಿಭಟಿಸಲು ಸಂಘಟನೆಗಳು ನಿರ್ಧರಿಸಿವೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಧನಾತ್ಮಕವಾಗಿ ಪ್ರತಿಕ್ರಿಯಿಸದಿದ್ದಲ್ಲಿ, ದೀಪಾವಳಿ ನಂತರ ಅನಿರ್ಧಿಷ್ಠಾವಧಿ ‘ರಸ್ತೆ ತಡೆ’ ನಡೆಸಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.