ಮೈಸೂರು[ನ.27]: ಪ್ರೇಮಿಗಳಿಬ್ಬರು ಟಿಬೇಟಿಯನ್ ಬಾವುಟಗಳನ್ನು ಕಟ್ಟುವ ಹಗ್ಗದಿಂದ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಗರದ ಪಿರಿಯಾಪಟ್ಟಣ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ.

ನಾಗನಹಳ್ಳಿ ದೊಡ್ಡೆಗೌಡನಕೊಪ್ಪಲು ಗ್ರಾಮದ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಡಿ.ಎಲ್.ವೀಣಾ, ಕೆಳಗನಹಳ್ಳಿ ದೊಡ್ಡಕೊಪ್ಪಲು ನಿವಾಸಿ ಕೆ.ಎನ್.ಸ್ವಾಮಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಸಿಡಿಲು ಮಲ್ಲಿಕಾರ್ಜುನ ಬೆಟ್ಟದ ವೀರಭದ್ರನ ಗುಡಿಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಜೋಡಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಾವಿಗೆ ಕಾರಣವೇನು ಎಂದು ಸ್ಪಷ್ಟವಾಗಿಲ್ಲ. 

ಪ್ರೇಮಿಗಳಿಬ್ಬರು ತಮ್ಮ ಸಾವಿಗೆ ತಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.