ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ  ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.

ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಪ್ರಚಾರ ಭಾಷಣದ ಸಂದರ್ಭದಲ್ಲಿ ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ. 

ಆದರೂ ನನ್ನನ್ನು ಅಪರಾಧಿ, ಅಪರಾಧ ಮಾಡಿದ್ದೇನೆಂದು ಬೆಂಬಿಸಲಾಗುತ್ತಿದೆ. ಯಾವುದೇ ತಪ್ಪು ಮಾಡದಿದ್ದರೂ ನನಗೆ ಅಧಿಕಾರ ಸಿಗಲಿಲ್ಲ ಎಂದು ಗೋಳೋ ಅತ್ತರು.