ಮಾಲೆಗಾಂವ್ ಬಾಂಬ್ ಸ್ಫೋಟ ಆರೋಪಿಗಳಿಗ ಹಿನ್ನಡೆ! ದೋಷಾರೋಪ ರದ್ದತಿಗೆ ನ್ಯಾಯಾಲಯ ನಿರಾಕರಣೆ! ಲೆ.ಕ. ಶ್ರೀಕಾಂತ್ ಪುರೋಹಿತ್, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್! ಚಾರ್ಜ್‌ಶೀಟ್ ಸಲ್ಲಿಸಿ ತನಿಖೆ ನಡೆಸಲು ನ್ಯಾಯಾಲಯ ಆದೇಶ
ನವದೆಹಲಿ(ಅ.30): ಮಹತ್ವದ ಬೆಳವಣಿಗೆಯೊಂದರಲ್ಲಿ 2008 ರ ಮಾಲೆಗಾಂವ್ ಬಾಂಬ್ ಸ್ಫೋಟದ ಪರಕರಣದ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಭಾರೀ ಹಿನ್ನೆಡೆಯಾಗಿದೆ.
ಮಾಲೆಂಗಾಂವ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಾದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಐವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಮತ್ತು ವಿವಿಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ದೋಷಾರೋಪವನ್ನು ರದ್ದುಗೊಳಿಸಲು ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ಕೇಂದ್ರದಲ್ಲಿ ಹಿಂದೂ ಪರ ಸರ್ಕಾರ ಇದ್ದು, ಮಾಲೆಂಗಾವ್ ಆರೋಪಿಗಳನ್ನು ರಕ್ಷಿಸಲಿದೆ ಎಂಬ ವಾದಕ್ಕೆ ತಣ್ಣೀರೆರಚಿದಂತಾಗಿದೆ.
ವಿಶೇಷ ನ್ಯಾಶನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ನ್ಯಾಯಾಲಯದ ನ್ಯಾಯಾಧೀಶ ವಿನೋದ್ ಪದಾಲ್ಕರ್, ಆರೋಪಿಗಳ ವಿರುದ್ಧದ ದೋಷಾರೋಪವನ್ನು ರದುಗೊಳಿಸಲು ನಿರಾಕರಿಸಿದ್ದಾರೆ. ಅಲ್ಲದೆ ಪುರೋಹಿತ್ ಸೇರಿ ಎಲ್ಲಾ ಏಳು ಮಂದಿ ಆರೊಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿ ತನಿಖೆ ನಡೆಸಬೇಕೆಂದು ಹೇಳಿದ್ದಾರೆ.
ಈ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದಾಗ 2008ರಲ್ಲಿ ಯುಪಿಎ ಸರ್ಕಾರ ಇದ್ದು, ಕೇಂದ್ರ ಉದ್ದೇಶಪೂರ್ವಕವಾಗಿ ಹಿಂದೂ ಭಯೋತ್ಪಾದನೆ ಎಂಬ ಗುಲ್ಲು ಎಬ್ಬಿಸಿ ಆರೋಪಿಗಳನ್ನು ಪ್ರಕರಣದಲ್ಲಿ ಸಿಲುಕಿಲಸು ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಅದರಂತೆ 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಾಗ, ಮಾಲೆಂಗಾವ್ ಆರೋಪಿಗಳು ಬಿಡುಗಡೆ ಹೊಂದಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಇದಕ್ಕೆ ಪುಷ್ಠಿ ಎಂಬಂತೆ ಲೆ.ಕ. ಪುರೋಹಿತ್ ಮತ್ತು ಸಾಧ್ವಿ ಪ್ರಜ್ಞಾ ಠಾಕೂರ್ ಅವರಿಗೆ ಮಧ್ಯಂತರ ಜಾಮೀನು ಕೂಡ ದೊರೆತಿತ್ತು. ಆದರೆ ಸದ್ಯ ಈ ಇಬ್ಬರೂ ಆರೋಪಿಗಳು ಸೇರಿದಂತೆ ಯಾರನ್ನೂ ದೋಷಾರೋಪದಿಂದ ಮುಕ್ತಗೊಳಿಸದಿರಲು ನ್ಯಾಯಾಲಯ ನಿರ್ಧರಿಸಿದ್ದು, ಹಿಂದೂ ಪರ ಸಂಘಟನೆಗಳಿಗೆ ಅಸಮಾಧಾನ ಮೂಡಿಸಿದ್ದರೆ, ಕೇಂದ್ರ ಸರ್ಕಾರ ನ್ಯಾಯಾಂಗದ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂಬುದು ಕೂಡ ಸಾಬೀತಾದಂತಿದೆ.
ಪುರೋಹಿತ್ ಮತ್ತು ಸಾಧ್ವಿ ಅವರಲ್ಲದೆ ಮೇಜರ್(ನಿವೃತ್ತ)ರಮೇಶ್ ಉಪಾಧ್ಯಾಯ, ಅಜಯ್ ರಹೀರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದ ಇತರ ಆರೋಪಿಗಳು.
ಪ್ರಕರಣದ ಪ್ರಮುಖ ಆರೊಪಿ ಪುರೋಹಿತ್ ತಮ್ಮ ವಿರುದ್ಧದ ದೋಷಾರೋಪಣೆ ಸಲ್ಲಿಕೆ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯಪುರೋಹಿತ್ ಅವರ ಮನವಿಯನ್ನು ತಿರಸ್ಕರಿಸಿದೆ.
