ಬೆಂಗಳೂರು: ನಗರದ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ರಾಜಭವನದಲ್ಲಿ ನಿನ್ನೆ ಸೋಮವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ಆರ್ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು. ಕೃಷ್ಣಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎಂ. ಕೃಷ್ಣಪ್ಪ ಅವರು ಬೆಂಗಳೂರಿನ ವಿಜಯನಗರ ಕ್ಷೇತ್ರದಲ್ಲಿ 2ನೇ ಬಾರಿ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅದಕ್ಕೂ ಮೊದಲು ವಿಧಾನ ಪರಿಷತ್'ನ ಸದಸ್ಯರಾಗಿದ್ದರು.