ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ಹಾಗೂ ಅದರ ಹಿಂದಿನ ಹಣದ ಪ್ರಭಾವದ ಕುರಿತು ಅಸಮಾಧಾನ ಭುಗಿಲೆದ್ದಿದ್ದು, ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮುಖ್ಯಸ್ಥರೂ ಆಗಿ ರುವ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಅವರು ಲೋಕೋಪ ಯೋಗಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ವಿರುದ್ಧ ಬಹಿರಂಗವಾಗಿ ಹರಿಹಾಯ್ದಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ಹಾಗೂ ಅದರ ಹಿಂದಿನ ಹಣದ ಪ್ರಭಾವದ ಕುರಿತು ಅಸಮಾಧಾನ ಭುಗಿಲೆದ್ದಿದ್ದು, ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮುಖ್ಯಸ್ಥರೂ ಆಗಿ ರುವ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಅವರು ಲೋಕೋಪ ಯೋಗಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ವಿರುದ್ಧ ಬಹಿರಂಗವಾಗಿ ಹರಿಹಾಯ್ದಿದ್ದಾರೆ.
ಗುರುವಾರ ರಾತ್ರಿ ಟ್ವೀಟ್ ಮಾಡಿರುವ ವೀರಪ್ಪ ಮೊಯ್ಲಿ, ‘ರಾಜಕೀಯದಲ್ಲಿನ ಹಣದ ಸಮಸ್ಯೆಯನ್ನು ಕಾಂಗ್ರೆಸ್ ಬಗೆಹರಿಸಿ ಕೊಳ್ಳಬೇಕಿದೆ. ರಸ್ತೆ ಗುತ್ತಿಗೆದಾರರು ಹಾಗೂ ರಾಜ್ಯ ಲೋಕೋಪಯೋಗಿ ಸಚಿವರ ಜೊತೆ ಅವರು ಹೊಂದಿರುವ ನಂಟು ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಬೇಕು ಎಂಬುದನ್ನು ನಿರ್ಧರಿಸುವುದು ದುಬಾರಿಯಾದೀತು’ ಎಂದು ಹೇಳಿದ್ದಾರೆ. ಇದೇ ರೀತಿಯ ಟ್ವೀಟ್ ಒಂದನ್ನು ಮೊಯ್ಲಿ ಅವರ ಪುತ್ರ, ಉದ್ಯಮಿ ಹರ್ಷ ಮೊಯ್ಲಿ ಅವರೂ ಮಾಡಿದ್ದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.
ಮೊಯ್ಲಿ ಅವರು ಈ ಟ್ವೀಟನ್ನು ರಾಹುಲ್ ಗಾಂಧಿ, ಕಾಂಗ್ರೆಸ್ ಹೈಕಮಾಂಡ್ ಹಾಗೂ ಕರ್ನಾಟಕ ಕಾಂಗ್ರೆಸ್ನ ಅಧಿಕೃತ ಟ್ವೀಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆಯ ಹಿಂದೆ ನಡೆಯುತ್ತಿರುವ ಬೆಳವಣಿಗೆಗಳನ್ನು ನೇರವಾಗಿ ಹೈಕಮಾಂಡ್ನ ಗಮನಕ್ಕೆ ತರಲು ಅವರು ಹೀಗೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ನೈಸ್ ಅವ್ಯವಹಾರದಲ್ಲಿ ಕಳಂಕಿತರಾಗಿರುವ ಬೀದರ್ ಶಾಸಕ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡಿದ್ದರ ವಿರುದ್ಧ ಹಿರಿಯ ಕಾಂಗ್ರೆಸಿಗ ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದಿದ್ದರು. ಅದರ ಬೆನ್ನಲ್ಲೇ ಮೊಯ್ಲಿ ಅವರ ಈ ಹೇಳಿಕೆ ಹೊರಬಿದ್ದಿರುವುದು ಮಹತ್ವ ಪಡೆದಿದೆ.
