ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವ ಸೇನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 21 ಅಭ್ಯರ್ಥಿಗಳು ಪಟ್ಟಿಯಲ್ಲಿದ್ದಾರೆ.
ಭೋಪಾಲ್ : ಮಧ್ಯ ಪ್ರದೇಶದಲ್ಲಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಶಿವ ಸೇನೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೊದಲ ಪಟ್ಟಿಯಲ್ಲಿ ಒಟ್ಟು 21 ಅಭ್ಯರ್ಥಿಗಳ ಹೆಸರನ್ನು ಪ್ರಕಟ ಮಾಡಲಾಗಿದೆ.
ಬಿಜೆಪಿಯೊಂದಿಗೆ ಕಳೆದ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಶಿವ ಸೇನೆ ಇದೀಗ ರಾಮಮಂದಿರ ನಿರ್ಮಾಣ ವಿಚಾರವಾಗಿ ಬಿಜೆಪಿ ವಿರುದ್ಧವೇ ತಿರುಗಿ ಬಿದ್ದಿದೆ.
ಟ್ರಿಪಲ್ ತಲಾಖ್, ಎಸ್ ಸಿ, ಎಸ್ಟಿ ಕಾಯ್ದೆ ಸಂಬಂಧ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ರಾಮಮಂದಿರ ವಿಚಾರವಾಗಿಯೂ ಕೂಡ ಮಹತ್ವದ ನಿರ್ಧಾರ ಕೈಗೊಳ್ಳಬೇಕು ಎಂದು ಶಿವ ಸೇನಾ ಹಿರಿಯ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.
ಇನ್ನು ಮುಂದಿನ ನವೆಂಬರ್ 28 ರಂದು ಮಧ್ಯ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11ರಂದು ಫಲಿತಾಂಶ ಪ್ರಕಟವಾಗಲಿದೆ.
