ಚುನಾವಣಾ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಭೋಪಾಲ್ : ಚುನಾವಣಾ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಮಧ್ಯ ಪ್ರದೇಶದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ಸತ್ರಾಜ್ ಸಿಂಗ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸಿಯೋನಿ ಪ್ರದೇಶದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸತ್ರಾಜ್ ಅವರು ಏಕಾಏಕಿ ಬಿಜೆಪಿ ಶಾಕ್ ನೀಡಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.
ಇದಾದ ಬೆನ್ನಲ್ಲೇ ಹೊಶಂಗಬಾದ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. 16 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಸತ್ರಾಜ್ ಹೆಸರನ್ನು ಕೂಡ ಪ್ರಕಟ ಮಾಡಲಾಗಿದೆ.
1998ರಲ್ಲಿ ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸ್ಪರ್ಧಿಸಿ ಸೋಲಿಸಿದ್ದರು. ಇದೀಗ ಈ ಕ್ಷೇತ್ರದಿಂದ ಮತ್ತೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದಾರೆ. ಹೊಶಂಗಬಾದ್ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಿದ ಕಾಂಗ್ರೆಸ್ ಗೆ ಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.
ನವೆಂಬರ್ 28 ರಂದು ಮಧ್ಯ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು ಈ ನಿಟ್ಟಿನಲ್ಲಿ ವಿವಿಧ ಪಕ್ಷಗಳು ಗೆಲುವುಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ.
