ಗಿರಿಜನರ ಬದುಕಿನ ಬಗ್ಗೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಧೋರಣೆ ತಾಳಿವೆ. ಬದುಕುವ ಹಕ್ಕನ್ನು ಸಂವಿಧಾನ ನೀಡಿದ್ದರೂ ಗಿರಿಜನರಿಗೆ ಅದಿನ್ನೂ ಗಗನಕುಸುಮವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಮಡಿಕೇರಿ(ಡಿ. 18): ದಿಡ್ಡಳ್ಳಿಯಲ್ಲಿ ಗಿರಿಜನರನ್ನು ಒಕ್ಕಲೆಬ್ಬಿಸುವ ಕಾರ್ಯದ ವಿರುದ್ಧ ಬುಡಕಟ್ಟು ನಿವಾಸಿಗಳು ಹೋರಾಟ ತೀವ್ರಗೊಳಿಸಿದ್ದಾರೆ. ಹೋರಾಟಗಾರ್ತಿ ಮುತ್ತಮ್ಮ ಸೇರಿದಂತೆ ಕೆಲ ಗಿರಿಜನ ವಾಸಿಗಳು ಬೆತ್ತಲೆ ಮೆರವಣಿಗೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆ ಸೇರಿದಂತೆ ಗಿರಿಜನರು ಬೆತ್ತಲಾಗಿ ಓಡಿದರೂ ಪೊಲೀಸರು ಅದನ್ನು ತಡೆಯುವ ಪ್ರಯತ್ನ ಮಾಡಲೇ ಇಲ್ಲ. ಇವರ ಎಕ್ಸ್'ಕ್ಲೂಸಿವ್ ದೃಶ್ಯಗಳು ಸುವರ್ಣನ್ಯೂಸ್'ನಲ್ಲಿ ಪ್ರಸಾರವಾಗಿವೆ.
ಗಿರಿಜನರ ಬದುಕಿನ ಬಗ್ಗೆ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ಧೋರಣೆ ತಾಳಿವೆ. ಬದುಕುವ ಹಕ್ಕನ್ನು ಸಂವಿಧಾನ ನೀಡಿದ್ದರೂ ಗಿರಿಜನರಿಗೆ ಅದಿನ್ನೂ ಗಗನಕುಸುಮವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಡಿಸೆಂಬರ್ 7 ರಂದು ಮುಂಜಾನೆ ಅರಣ್ಯ ಇಲಾಖೆ ಅಧಿಕಾರಿಗಳು 577 ಆದಿವಾಸಿ, ಗಿರಿಜನ ಕುಟುಂಬಗಳನ್ನು ಒಕ್ಕಲೆಬ್ಬಿಸಿದ್ದರು.
