ಸಾವಿನ ಕುರಿತಂತೆ ಎಐಎಡಿಎಂಕೆ ಕಾರ್ಯಕರ್ತ ಜೋಸೆಫ್ ಎಂಬುವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

ಚೆನ್ನೈ(ಡಿ.29): ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಮದ್ರಾಸ್ ಹೈಕೋರ್ಟ್ ಅನುಮಾನ ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಗೆ ಯಾಕೆ ಆದೇಶ ಮಾಡಬಾರದು ಎಂದು ತಮಿಳುನಾಡು ಸರ್ಕಾರಕ್ಕೆ ಪ್ರಶ್ನಿಸಿದೆ. ಹೈಕೋರ್ಟ್'ನ ನ್ಯಾಯಾಧೀಶರಾದ ವೈದ್ಯನಾಥನ್ ಅನುಮಾನ ವ್ಯಕ್ತಪಡಿಸಿ, ಜಯಾ ಚಿಕಿತ್ಸೆಯ ಕುರಿತ ಮಾಹಿತಿ ಗೌಪ್ಯವಾಗಿಟ್ಟಿದ್ದೇಕೆ? ಈ ಬಗ್ಗೆ ಕೇಂದ್ರ ಸರ್ಕಾರ ಕೂಡ ಮೌನವಹಿಸಿದೆ.ಕೆಲವು ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿದೆ. ಆದ್ದರಿಂದ ಜಯಾ ಸಾವಿನ ಕುರಿತಂತೆ ನನಗೂ ಅನುಮಾನ ವ್ಯಕ್ತವಾಗಿದೆ ಎಂದು ಸರ್ಕಾರನ್ನು ಪ್ರಶ್ನಿಸಿದ್ದಾರೆ.

ಸಾವಿನ ಕುರಿತಂತೆ ಎಐಎಡಿಎಂಕೆ ಕಾರ್ಯಕರ್ತ ಜೋಸೆಫ್ ಎಂಬುವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 22 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಲಿತಾ ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 5 ರಂದು ಅಕಾಲಿಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದರು.

 ಜಯಾ ಸಾವಿನ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿದ್ದವು.ತಮಿಳು ಚಿತ್ರನಟಿ ಗೌತಮಿ ಕೂಡ ಜಯಾ ಅವರ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.