ಮಹದಾಯಿ ಯೋಜನೆ ಜಾರಿ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆ ಮುಕ್ತಾಯಗೊಂಡಿದೆ.

ಬೆಂಗಳೂರು (ಡಿ.20)): ಮಹದಾಯಿ ಯೋಜನೆ ಜಾರಿ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆ ಮುಕ್ತಾಯಗೊಂಡಿದೆ.

ಮಹದಾಯಿ ವಿಚಾರದ ಬಗ್ಗೆ ಗೋವಾ ಸಿಎಂ ಜೊತೆ ಮಾತುಕತೆ ನಡೆಸಿದ್ದೇವೆ. ನಾಳೆಯೊಳಗೆ ಗೋವಾ ಸಿಎಂ ಅನುಮತಿ ಕೊಡುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ನಾಳೆ ಗೋವಾ ಸಿಎಂ ಕಳುಹಿಸುವ ಮಾಹಿತಿಯನ್ನು ಪ್ರಕಟಿಸಲಿದ್ದೇವೆ. ನಾಳೆ ಹುಬ್ಬಳ್ಳಿಯಲ್ಲಿ ನಡೆಯುವ ಪರಿವರ್ತನಾ ಯಾತ್ರೆಯಲ್ಲಿ ಲಕ್ಷಾಂತರ ಜನರ ಮುಂದೆ ಘೋಷಣೆ ಮಾಡುತ್ತೇವೆ ಎಂದು ಅಮಿತ್ ಶಾ ಜೊತೆ ಮಾತುಕತೆ ಬಳಿಕ ಯಡಿಯೂರಪ್ಪ ಸುವರ್ಣ ನ್ಯೂಸ್’ಗೆ ಹೇಳಿದ್ದಾರೆ.