ಬೆಳಗಾವಿಯ ಸುರ್ಣಸೌಧದಲ್ಲಿ  ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆದರೂ ಅದರಲ್ಲಿ ಉತ್ತರ ಕರ್ನಾಟಕದ ಭಾಗದ ಶಾಸಕರು ನಿರಾಸಕ್ತಿ ತೋರಿದ್ದನ್ನು ಖಂಡಿಸಿ ಇಂದು ಬಂಡಾಯದ ನೆಲೆ ನರಗುಂದದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗದಗ (ನ.26): ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟ ಆರಂಭವಾಗಿ ಇಂದಿಗೆ 500 ದಿನಗಳು ಕಳೆದಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಆಸಕ್ತಿ ತೋರಿಸಿಲ್ಲ. ಅಲ್ಲದೇ ಬೆಳಗಾವಿಯ ಸುರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ನಡೆದರೂ ಅದರಲ್ಲಿ ಉತ್ತರ ಕರ್ನಾಟಕದ ಭಾಗದ ಶಾಸಕರು ನಿರಾಸಕ್ತಿ ತೋರಿದ್ದನ್ನು ಖಂಡಿಸಿ ಇಂದು ಬಂಡಾಯದ ನೆಲೆ ನರಗುಂದದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನಾಕಾರರು ತಮ್ಮ ಸಿಟ್ಟನ್ನು ಪ್ರದರ್ಶಿಸಿದರು.