ಮಹಾದಾಯಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿತ್ಯದ ವ್ಯವಹಾರಗಳು ಸಂಪೂರ್ಣವಾಗಿ ಸ್ತಬ್ಧವಾಗಿದೆ.
ಬೆಂಗಳೂರು(ಡಿ.27): ಮಹಾದಾಯಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿತ್ಯದ ವ್ಯವಹಾರಗಳು ಸಂಪೂರ್ಣವಾಗಿ ಸ್ತಬ್ಧವಾಗಿದೆ.
ಪ್ರತಿಭಟನಾಕಾರರಿಂದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಹದಾಯಿ ನದಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಬಂದ್ ನಡೆಸಲಾಗುತ್ತಿದ್ದು, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಸ್ತಬ್ಧವಾಗಿವೆ.
ನಾಲ್ಕೂ ಜಿಲ್ಲೆಗಳ ಒಟ್ಟು 13 ತಾಲೂಕುಗಳು ಬಂದ್ ಆಗಿವೆ. ಪ್ರತಿಭಟನಾಕಾರರು ಮೋದಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸುತ್ತಿದ್ದಾರೆ.
