ಮುಂಜಾನೆ 6 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಬಂದ್ ಘೋಷಣೆ ಮಾಡಲಾಗಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ ,ತುರ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡಲಾಗುತ್ತದೆ. ‌

ಹುಬ್ಬಳ್ಳಿ(ಡಿ.26): ಮಹದಾಯಿ, ಕಳಸಾ ಬಂಡೂರಿ ಹೋರಾಟ ಸಮಿತಿಯಿಂದ ನಾಳೆ ಉತ್ತರ ಕರ್ನಾಟಕ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಉಗ್ರ ಹೋರಾಟ ನಡೆಸಲಾಗುವದು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಏಕರೂಪದ ನಿರ್ಣಯ ತಗೆದುಕೊಂಡಿದೆ.

50 ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು, ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್ ಮಾಡುವ ನಿರ್ಧಾರ ತಗೆದುಕೊಂಡಿದ್ದಾರೆ. ಮುಂಜಾನೆ 6 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಬಂದ್ ಘೋಷಣೆ ಮಾಡಲಾಗಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ ,ತುರ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಬಂದ್ ಮಾಡಲಾಗುತ್ತದೆ. ‌

ಹುಬ್ಬಳ್ಳಿ ‌ಧಾರವಾಡ ಅವಳಿ ನಗರ ಸೇರಿದಂತೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ಬಂದ್ ಮಾಡಲಾಗುತ್ತಿದೆ. ರೈತ ಸಂಘಟನೆಗಳು ಸೇರಿದಂತೆ ಕನ್ನಡಪರ ಸಂಘಟನೆ ಸೇರಿದಂತೆ ‌100 ಕ್ಕೂ ಹೆಚ್ಚು ಸಂಘಟನೆಗಳು ಬಂದ್'ಗೆ ಬೆಂಬಲಿಸುತ್ತಿವೆ. ಪ್ರತಿಯೊಂದು ಮನೆಯಿಂದ ಇಬ್ಬರು ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗಿಯಾಗಲು ಹೋರಾಟಗಾರರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ

ನಾಳೆ ಬಸ್ ಸಂಚಾರ, ಅಂಗಡಿ ಮುಂಗಟ್ಟು, ಶಾಲಾ‌ಕಾಲೇಜು ಬಂದ್ ಮಾಡಲಾಗುವದು. ಕೇಂದ್ರ ಸರ್ಕಾರದ ಕಚೇರಿಗಳಾದ ಅಂಚೆ ಕಚೇರಿ ಹಾಗೂ ರೈಲು‌ ನಿಲ್ದಾಣ ಹಾಗೂ ಸಂಸದರ ಕಚೇರಿಗೆ ಮುತ್ತಿಗೆ ಹಾಕಲಾಗುವದು ಎಂದು ಹೋರಾಟಗಾರರು ಒಕ್ಕೋರಲ್ಲಿನ ನಿರ್ಣಯ ತಗೆದುಕೊಂಡಿದ್ದಾರೆ.