ಸಂತೋಷ್‌, ಲಕ್ಷ್ಮಣ ಸವದಿ ಮಹಾರಾಷ್ಟ್ರ ಬಿಜೆಪಿ ತಾರಾ ಪ್ರಚಾರಕರು| 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಮುಂಬೈ[ಅ.12]: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ತನ್ನ 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಅದರಲ್ಲಿ ಕರ್ನಾಟಕ ಮೂಲದ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಎಲ್‌. ಸಂತೋಷ್‌ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೂ ಸ್ಥಾನ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸವದಿ ಅವರು ಈ ಮುನ್ನ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರಾಗಿ ಕೆಲಸ ಮಾಡಿದ್ದರು. ಈ ಆಧಾರದಲ್ಲಿ ಮಹಾರಾಷ್ಟ್ರ ಗಡಿಯ ಅಥಣಿಯವರಾದ ಸವದಿ ಅವರಿಗೆ ತಾರಾ ಪ್ರಚಾರಕ ಪಟ್ಟಕಟ್ಟಲಾಗಿದೆ.

ಉಳಿದಂತೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಕಾರ್ಯಾಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌- ಮೊದಲಾದವರಿದ್ದಾರೆ. ಟಿಕೆಟ್‌ ನಿರಾಕರಿಸಲ್ಪಟ್ಟಏಕನಾಥ ಖಡ್ಸೆ ಹಾಗೂ ವಿನೋದ್‌ ತಾವಡೆ ಅವರಿಗೂ ತಾರಾ ಪ್ರಚಾರಕ ಪಟ್ಟನೀಡಲಾಗಿದೆ.