ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಪತ್ನಿ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರ ಪತ್ನಿ ಅಮೃತಾ ಫಡ್ನಾವಿಸ್ ಅವರು ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
ಮುಂಬೈ - ಗೋವಾ ಹಡಿಗಿನಲ್ಲಿ ಪ್ರಯಾಣಿಸುವ ವೇಳೆ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ನಿಂತು ಸೆಲ್ಫಿ ತೆಗೆದುಕೊಂಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಅಲ್ಲದೇ ಅಮೃತಾ ಅವರು ಹೀಗೆ ಅಪಾಯಕಾರಿ ಸ್ಥಳದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
ಹಡಗಿನ ಅತ್ಯಂತ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಅವರ ಹಿಂದೆ ಕೆಲ ಪೊಲೀಸ್ ಸಿಬ್ಬಂದಿ ಇದ್ದು ಸೂಕ್ತ ಸ್ಥಳಕ್ಕೆ ಬರುವಂತೆ ಕರೆದಿರುವು ಈ ವಿಡಿಯೋದಲ್ಲಿ ಕಂಡು ಬಂದಿದೆ.
ಶನಿವಾರವಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ಹಡಗನ್ನು ಉದ್ಘಾಟನೆ ಮಾಡಿದ್ದರು. ಈ ವೇಳೆ ಸಿಎಂ ಫಡ್ನಾವಿಸ್ ಪತ್ನಿ ಕೂಡ ಪಾಲ್ಗೊಂಡಿದ್ದರು.
