ಕೈ ಪಾಳೆಯದಲ್ಲಿ ಭುಗಿಲೆದ್ದ ಭಿನ್ನಮತ| ಲೋಕಸಭೆ ಸೋಲಿನ ಬಳಿಕ ‘ಕೈ’ ಬಿಡುತ್ತಿರುವ ನಾಯಕರು| ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ| ಪಕ್ಷ ತೊರೆದು ಬಿಜೆಪಿ ಸೇರಲಿರುವ ರಾಧಾಕೃಷ್ಣ ವಿಖೆ ಪಾಟೀಲ್| ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ| ವಿಖೆ ಪಾಟೋಲ್ ಜೊತೆ ಹೋಗಲಿದ್ದಾರಾ ಇತರ ಕೈ ಶಾಸಕರು?|
ಮುಂಬೈ(ಜೂ.04): ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಖೆ ಪಾಟೀಲ್ ಬಿಜೆಪಿ ಸೇರುವ ಸಾಧ್ಯತೆ ಹೆಚ್ಚಿದ್ದು, ಇತರ ಕೆಲವು ಕಾಂಗ್ರೆಸ್ ಶಾಸಕರೂ ಅವರನ್ನು ಹಿಂಬಾಲಿಸುವ ಸಾಧ್ಯತೆ ದಟ್ಟವಾಗಿದೆ.
ಬಿಜೆಪಿ ಸೇರಲಿರುವ ವಿಖೆ ಪಾಟೀಲ್ ಅವರಿಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಅವರು ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅಲ್ಲದೆ ಅಹ್ಮದನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಜಯ್ ಅವರು ಬರೊಬ್ಬರಿ 2.81 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಕಾಂಗ್ರೆಸ್ ನಾಯಕ ವಿಖೆ ಪಾಟೀಲ್ ಪಾಟೀಲ್, ವಿಧಾಸಭೆ ಸ್ಪೀಕರ್ ಹರಿಭಾವು ಬಾಗಡೆ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
