ಮುಂಬೈ: ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಜೊತೆ ಬಿಜೆಪಿ ಮೈತ್ರಿ ಮುಂದುವರೆಯಲಿದೆ.

ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ನೀಡಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ ಸುಧೀರ್‌ ಮುಗಂಟಿವಾರ್‌ ಹೇಳಿದ್ದಾರೆ. ಇದೇ ವೇಳೆ ಸೀಟು ಹಂಚಿಕೆ ಬಗ್ಗೆ ಶೀಘ್ರದಲ್ಲೇ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿದ್ದಾರೆ.

ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಚುನಾವಣೆಯಲ್ಲಿ ನಾವು 228 ಕ್ಷೇತ್ರಗಳ ಪೈಕಿ 220ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುತ್ತೇವೆ. ಈ ಬಗ್ಗೆ ಯಾವುದೇ ಅನುಮಾನಬೇಡ ಎಂದು ಸೋಮವಾರ ನಾಸಿಕ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡುವ ವೇಳೆ ಹೇಳಿದ್ದಾರೆ.