ಕೊರೋನಾ ಸೋಂಕು ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಇನ್ನು ಕರ್ನಾಟಕದಲ್ಲಿ ಮುಂದುವರಿಯುತ್ತಾ ಲಾಕ್ ಡೌನ್..?

ಮುಂಬೈ, (ಮೇ.17): ದೇಶದಲ್ಲಿ ಕೊರೋನಾ ವೈರಸ್ ಸೋಂಕು ಹಾಟ್ ಸ್ಪಾಟ್ ಗಳ ಪೈಕಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ವಿನಾಯಿತಿಯಿಲ್ಲದೆ ಲಾಕ್‌ಡೌನ್ ಮೇ 31ರ ವರೆಗೆ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ಹೊರಡಿಸಿದ್ದಾರೆ. 

ಭಾರತದಲ್ಲಿ 90000 ಗಡಿ ದಾಟಿದ ಕೊರೋನಾ ಸೋಂಕು!

ಸದ್ಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರ ಗಡಿ ದಾಟಿದ್ದು, 1135 ಸಾವನ್ನಪ್ಪಿದ್ದಾರೆ. ಇನ್ನು 7,088 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Scroll to load tweet…

ಕೊರೋನಾ ಸೋಂಕು ತಡೆಗೆ ಜಾರಿಗೊಳಿಸಿರುವ 3ನೇ ಹಂತದ ಲಾಕ್‌ಡೌನ್ ಇಂದು (ಭಾನುವಾರ) ಮುಕ್ತಾಯವಾಗಲಿದ್ದು ಹೊಸ ಮಾರ್ಗಸೂಚಿಗಳೊಂದಿಗೆ ಸೋಮವಾರದಿಂದ 4ನೇ ಹಂತದ ಲಾಕ್ ಡೌನ್ ಆರಂಭವಾಗಲಿದೆ.

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಪಂಜಾಬ್, ಮಿಜೋರಾಂನಲ್ಲಿ ಮೇ 31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿವೆ. ಇದೀಗ ಮಹಾರಾಷ್ಟ್ರದಲ್ಲೂ ವಿಸ್ತರಣೆ ಮಾಡಲಾಗಿದೆ. ಕಠಿಣ ನಿರ್ಬಂದಗಳೊಂದಿಗೆ ಲಾಕ್ ಡೌನ್ ಮುಂದುವರೆಸಲಾಗುವುದು ಎನ್ನಲಾಗಿದೆ.

ಆದ್ರೆ, ಕರ್ನಾಟಕದಲ್ಲಿ ಮಾತ್ರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿ ಬಿಡುಗಡೆಯಾದ ನಂತರ ರಾಜ್ಯದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಲಾಗುವುದು ಎನ್ನಲಾಗಿದೆ.