ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಡಾರ್ ಸಮಸ್ಯೆ ಎದುರಾಗಿದ್ದು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದುರಸ್ಥಿಗೆ 2 ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ನೋ (ಜ.14): ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಡಾರ್ ಸಮಸ್ಯೆ ಎದುರಾಗಿದ್ದು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ದುರಸ್ಥಿಗೆ 2 ದಿನಗಳು ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಸೇವೆಯನ್ನು ಸ್ಥಗಿತಗೊಳಿಸಿರುವುದು ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದ 20 ವಿಮಾನ ಹಾರಾಟದ ಮೇಲೆ ಪರಿಣಾಮ ಬೀರಿದೆ.
ಈ ವಿಮಾನ ನಿಲ್ದಾಣದ ಪ್ರಮುಖ ರೇಡಿಯೋ ಸಾಧನಗಳಲ್ಲಿ ಸಂಜೆ 4.30 ರ ಸುಮಾರಿಗೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಇದು ವಿಮಾನ ಹಾರಾಟದ ಮೇಲೆ ಪರಿಣಾಮ ಬೀರುವುದರಿಂದ ಸ್ಥಗಿತಗೊಳಿಸಲಾಗಿದೆ ಎಂದು ಓಎಸ್ ಡಿ ನಿರ್ದೇಶಕ ಸಂಜಯ್ ನಾರೈನ್ ಹೇಳಿದ್ದಾರೆ.
ತಾಂತ್ರಿಕ ತಂಡ ಹಾಗೂ ಇತರ ಸಿಬ್ಬಂದಿಗಳು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ.
