ಇನ್ನೆರಡು ದಿನದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 9, Sep 2018, 10:36 AM IST
Make Over In Karnataka Politics Soon
Highlights

ಕರ್ನಾಟಕ ರಾಜಕೀಯದಲ್ಲಿ ಇನ್ನೆರಡು ದಿನದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. 

ನವದೆಹಲಿ: ಬೆಳಗಾವಿಯ ನಾಯಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಜಗಳ ಇದೀಗ ಜಗಜ್ಜಾಹಿರಾಗಿದೆ. ಈ ಸಂಬಂಧ ಮಾತನಾಡಿರುವ ಬಿಜೆಪಿ ಮುಖಂಡ ಈಶ್ವರಪ್ಪ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಈಗಿರುವ ಅಸಮಾಧಾನಗಳ ಕಾರಣದಿಂದಲೇ ಉರುಳಲಿದೆ ಎಂದು ಹೇಳಿದ್ದಾರೆ. 

ಪಿಎಲ್‌ಡಿ ಬ್ಯಾಂಕ್ ಪ್ರಕರಣದಲ್ಲಿ ಕಾಂಗ್ರೆಸ್ ನಲ್ಲಿರುವ ಗೊಂದಲಗಳು ಬಹಿರಂಗ ಗೊಂಡಿವೆ. ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಮೈತ್ರಿ ಸರ್ಕಾರ ತನ್ನಷ್ಟಕ್ಕೆ ಪತನಗೊಳ್ಳಲಿದೆ ಎಂದು ಬಿಜೆಪಿ  ಈಶ್ವರಪ್ಪ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಎರಡು ದಿನದಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ತಿಳಿಸಿದರು.

loader