ನವದೆಹಲಿ, (ನ.3): ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಅಧಿಕಾರವಧಿಯಲ್ಲಿ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ವಿರುದ್ಧಕಾಂಗ್ರೆಸ್​ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

ಕೇಂದ್ರ ಸರ್ಕಾರ ಹಾಗೂ ಸಿಬಿಐ ನಡುವಿನ ತಿಕ್ಕಾಟ ಸಂಬಂಧ ಕಾಂಗ್ರೆಸ್​ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಧೋವಲ್ ಮಾತು ಕೇಳಿ ವರ್ಮಾ ನೇಮಿಸಿದ್ರಾ ಮೋದಿ?

ಸಿಬಿಐ ಮುಖ್ಯಸ್ಥರ ಅಧಿಕಾರಾವಧಿಯನ್ನು ಮೊಟಕುಗೊಳಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಬಾಹೀರವಾಗಿ ನಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

ಸಿಬಿಐ ರಂಪಾಟ: ವಿಪಕ್ಷಗಳಿಂದ ಭಾರೀ ಪ್ರತಿಭಟನೆ!

ಸಿಬಿಐ ಒಂದು ಸ್ವಾಯತ್ತ ತನಿಖಾ ಸಂಸ್ಥೆಯಾಗಿದೆ. ಆ ಸಂಸ್ಥೆಯ ನಿರ್ದೇಶಕರ ಅಧಿಕಾರಾವಧಿಯಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಕೇಂದ್ರೀಯ ವಿಚಕ್ಷಣ ಸಮಿತಿ (ಸಿವಿಸಿ)ಗೆ ಮತ್ತು ಕೇಂದ್ರ ಸರ್ಕಾರಕ್ಕೆ ಇಲ್ಲ.

ಅಲೋಕ್ ವರ್ಮಾರ ಅಧಿಕಾರದ ಅವಧಿ ಇನ್ನೂ 2 ವರ್ಷ ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನ ಮನೆಗೆ ಕಳುಹಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.