ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಮಹತ್ತರ ಹೊಣೆ ನೀಡುವ ಸಾಧ್ಯತೆ ದಟ್ಟವಾಗಿದೆ. ಆದರೆ, ಈ ಮಹತ್ತರ ಹೊಣೆ ಕೆಪಿಸಿಸಿ ಅಧ್ಯಕ್ಷ ಗಾದಿಯಾಗಿರುತ್ತೋ? ಅಥವಾ ಒಟ್ಟಾರೆ ಉಸ್ತುವಾರಿಯ ಹೊಣೆಗಾರಿಕೆಯಾಗಲಿದೆಯೋ ಎಂಬುದು ಇನ್ನೂ ಸ್ಪಷ್ಟವಿಲ್ಲ.

ಬೆಂಗಳೂರು(ಮೇ.11): ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಮಹತ್ತರ ಹೊಣೆ ನೀಡುವ ಸಾಧ್ಯತೆ ದಟ್ಟವಾಗಿದೆ. ಆದರೆ, ಈ ಮಹತ್ತರ ಹೊಣೆ ಕೆಪಿಸಿಸಿ ಅಧ್ಯಕ್ಷ ಗಾದಿಯಾಗಿರುತ್ತೋ? ಅಥವಾ ಒಟ್ಟಾರೆ ಉಸ್ತುವಾರಿಯ ಹೊಣೆಗಾರಿಕೆಯಾಗಲಿದೆಯೋ ಎಂಬುದು ಇನ್ನೂ ಸ್ಪಷ್ಟವಿಲ್ಲ.

ದೆಹಲಿ ಮಟ್ಟದಲ್ಲಿ ಖರ್ಗೆ ಅವರನ್ನು ರಾಜ್ಯಕ್ಕೆ ಕಳುಹಿಸುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಆದರೆ, ಯಾವ ಸ್ವರೂಪದಲ್ಲಿ ಅವರನ್ನು ರಾಜ್ಯಕ್ಕೆ ಕಳುಹಿಸಬೇಕು ಎಂಬ ಬಗ್ಗೆ ಹೈಕಮಾಂಡ್‌ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ. ಒಂದು ಮೂಲದ ಪ್ರಕಾರ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಆಗ ಸಿದ್ದರಾಮಯ್ಯ ಅವರಿಂದಾಗಿ ಹಿಂದುಳಿದ ಹಾಗೂ ಖರ್ಗೆ ಅವರಿಂದಾಗಿ ದಲಿತ ವರ್ಗ ಕಾಂಗ್ರೆಸ್‌ ಪರ ಗಟ್ಟಿಯಾಗಿ ನಿಲ್ಲುವ ಮೂಲಕ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುವ ಅವಕಾಶ ಹೆಚ್ಚಾಗುತ್ತದೆ ಎನ್ನುವ ಮಾತು ಕೇಳಿಬರುತ್ತಿದೆ.

ಒಂದು ವೇಳೆ ಖರ್ಗೆ ರಾಜ್ಯಕ್ಕೆ ಮರಳಿದರೆ, ಸಿಎಂ ಸಿದ್ದರಾಮಯ್ಯ ಹಾಗೂ ಕೆಲವು ಮುಖಂಡರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಹೀಗಾಗಿ ಖರ್ಗೆ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿ ಇಬ್ಬರಲ್ಲೂ ಸಾಮರಸ್ಯ ಮೂಡಿಸುವ ಪ್ರಯತ್ನವನ್ನು ಹೈಕಮಾಂಡ್‌ ನಡೆಸಲಿದೆ ಎನ್ನಲಾಗಿದೆ.