ಇಂದು ಖೂಬಾ ರಾಜೀನಾಮೆ

First Published 3, Apr 2018, 7:19 AM IST
Mallikharjun Khuba Resign Today
Highlights

ಬಿಜೆಪಿ ಸೇರ್ಪಡೆಗೆ ಮುಂದಾಗಿರುವ ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ್‌ ಖೂಬಾ ಅವರು ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ರಾಜಿನಾಮೆ ಸಲ್ಲಿಸಲಿದ್ದಾರೆ.

ಬೀದರ್‌: ಬಿಜೆಪಿ ಸೇರ್ಪಡೆಗೆ ಮುಂದಾಗಿರುವ ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ್‌ ಖೂಬಾ ಅವರು ಮಂಗಳವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿಯಾಗಿ ರಾಜಿನಾಮೆ ಸಲ್ಲಿಸಲಿದ್ದಾರೆ.

ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿರುವ ಅವರು, ಒಂದೆರಡು ದಿನದಲ್ಲಿ ಬಿಜೆಪಿ ರಾಜ್ಯ ಮುಖಂಡರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಪಡಿಸಿಕೊಳ್ಳುತ್ತೇನೆ. ಮಂಗಳವಾರ ರಾಜಿನಾಮೆ ಸಲ್ಲಿಸುವ ಉದ್ದೇಶದಿಂದ ಸ್ಪೀಕರ್‌ ಅವರ ಭೇಟಿಗೆ ಸಮಯ ಪಡೆದುಕೊಂಡಿದ್ದೇನೆ. ಬೆಳಗ್ಗೆ 10 ಗಂಟೆಗೆ ರಾಣೆಬೆನ್ನೂರಿಗೆ ತೆರಳಿ ರಾಜಿನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

loader