ಕೋಲ್ಕತ್ತಾ(ಜೂ.15): ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ 5 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಕಿರಿಯ ವೈದ್ಯರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿರುವುದಾಗಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

"

ವೈದ್ಯರ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದ್ದು, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ. ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಮಮತಾ, ಹಲ್ಲೆಗೊಳಗಾದ ಕಿರಿಯ ವೈದ್ಯ ಪರಿಬಾಹಾ ಮುಖ್ಯೋಪಾಧ್ಯಾಯ ಅವರನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೂಡಲೇ ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಪ.ಬಂಗಾಳ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಕಿರಿಯ ವೈದ್ಯರ ಎಲ್ಲಾ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದಾಗಿ ಮಮತಾ ಭರವಸೆ ನೀಡಿದ್ದಾರೆ.

ರೋಗಿಯ ಸಾವಿನ ಹಿನ್ನೆಲೆಯಲ್ಲಿ ಆತನ ಸಂಬಂಧಿಕರು ವೈದ್ಯ ಪರಿಬಾಹಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಸರ್ಕಾರಿ ಕಿರಿಯ ವೈದ್ಯರು ಕಳೆದ 5 ದಿನಗಳಿಂದ ಪ.ಬಂಗಾಳದಲ್ಲಿ ಭಾರೀ ಪ್ರತಿಭಟನೆ ನಡೆಸಸುತ್ತಿದ್ದಾರೆ.