ನವದೆಹಲಿ : ಲೋಕಸಭಾ ಚುನಾವಣೆ ಮುಕ್ತಾಯವಾಗಿ BJP ನೇತೃತ್ವದ NDA ದೇಶದಾದ್ಯಂತ ಭಾರೀ ಬಹುಮತಗಳಿಸಿ ಅಧಿಕಾರಕ್ಕೆ ಏರಲು ಸಜ್ಜಾಗಿದೆ. 

ಮೇ 30 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರಮುಖ ಗಣ್ಯರಿಗೆ ಆಹ್ವಾನ ನೀಡಲಾಗಿದೆ. 

ಪರಸ್ಪರ ವಿರೋಧಿ ನಾಯಕರಾದ ಮಮತ ಬ್ಯಾನರ್ಜಿ ಅವರಿಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಮಮತಾ ಒಪ್ಪಿದ್ದಾರೆ. 

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪರಸ್ಪರ ವಿರೋಧಿಗಳಾಗಿ ಹೋರಾಡಿದ್ದು, ಟಿಎಂಸಿ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ 18 ಸ್ಥಾನಗಳಲ್ಲಿ ಜಯಗಳಿಸಿತ್ತು. 

ಮೇ 30ರಂದು ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹಲವು ರಾಷ್ಟ್ರೀಯ, ಅಂತರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದು, ರಾಜಕೀಯ ಧ್ವೇಷ ಮರೆತು ಆಹ್ವಾನ ನೀಡಿದ್ದು, ಮಮತಾ ಕೂಡ ತೆರಳಲಿದ್ದಾರೆ.