ಮಮತಾ ಬ್ಯಾನರ್ಜಿ ಹಿರಣ್ಯಕಶಿಪು ರಾಕ್ಷಸ ವಂಶದವರು ಎಂದು ಬಿಜೆಪಿ ನಾಯಕ ಸಾಕ್ಷಿ ಮಹಾರಾಜ್ ವಿವಾದಿತ ಹೇಳಿಕೆ ನೀಡಿದ್ದಾರೆ. 

ನವದೆಹಲಿ: ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಜೈಲಿಗಟ್ಟಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಕ್ಷಸ ಹಿರಣ್ಯ ಕಶಿಪು ವಂಶದವರು ಎಂದು ಉತ್ತರ ಪ್ರದೇಶದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಕಿಡಿಕಾರಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ‘ಹಿರಣ್ಯಕಶಿಪು ವಿಷ್ಣುವಿನ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದ ತನ್ನ ಮಗನಾದ ಪ್ರಹ್ಲಾದ ನಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡುತ್ತಾನೆ. 

ಅಲ್ಲದೆ, ಆತನನ್ನು ಸೆರೆವಾಸದಲ್ಲಿಡುತ್ತಾನೆ. ಹಿರಣ್ಯಕಶಿಪು ರೀತಿಯಲ್ಲೇ ಮಮತಾ ಅವರು ಜೈ ಶ್ರೀ ರಾಮ್ ಘೋಷಣೆ ಕೂಗಿದವರನ್ನು ಜೈಲಿಗಟ್ಟುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.