ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ  ನಡೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

 ನವದೆಹಲಿ (ಅ.27): ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಏನೇ ಆಗಲಿ, ನಾನು ಮೊಬೈಲ್ ಸಂಖ್ಯೆಯೊಂದಿಗೆ ಆಧಾರನ್ನು ಲಿಂಕ್ ಮಾಡಲ್ಲ; ಸಂಪರ್ಕ ಸ್ಥಗಿತಗೊಳಿಸಿದರೂ ಪರ್ವಾಗಿಲ್ಲ,’ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. ಮುಂದುವರಿದು, ಎಲ್ಲರೂ ಕೂಡಾ ಇದೇ ರೀತಿ (ಲಿಂಕ್ ಮಾಡಿಸದೇ) ಆಧಾರ್ ಕಡ್ಡಾಯಗೊಳಿಸುವಿಕೆಯ ವಿರುದ್ಧ ಪ್ರತಿಭಟನೆ ನಡೆಸಬೇಕೆಂದು ಕರೆಕೊಟ್ಟಿದ್ದಾರೆ. ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡುವುದು ಖಾಸಗಿತನ ಹಕ್ಕಿನ ಉಲ್ಲಂಘನೆಯಾಗಿದೆ. ಇದು ಮುಂದುವರೆದರೆ, ಪತಿ-ಪತ್ನಿಯ ಖಾಸಗಿ ಸಂಭಾಷಣೆಗಳು ಕೂಡಾ ಸಾರ್ವಜನಿಕವಾಗಬಹುದು, ಎಂದು ದೀದಿ ಹೇಳಿದ್ದಾರೆ.