ಬಿಜೆಪಿ ವಿರುದ್ಧ ಸಮರ ಸಾರಲು ಸೋನಿಯಾ ಭೇಟಿ ಮಾಡಿದ ಮಮತಾ ಬ್ಯಾನರ್ಜಿ

news | Thursday, March 29th, 2018
Suvarna Web Desk
Highlights

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಎಐಸಿಸಿ ಮುಖಂಡೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. 

ನವದೆಹಲಿ : ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಎಐಸಿಸಿ ಮುಖಂಡೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಬುಧವಾರ ಇಬ್ಬರ ಭೇಟಿ ನಡೆದಿದ್ದು, ಬಿಜೆಪಿ ವಿರುದ್ಧ ಸಮರ ಸಾರುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬುಧವಾರ ದಿನಪೂರ್ತಿ ಮಮತಾ ಬ್ಯಾನರ್ಜಿ ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗಿದೆ.  

ಈ ವೇಳೆ ಆಪ್ ಮುಖಂಡ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಯಶವಂತ್ ಸಿನ್ಹಾ ಅವರು ಹಾಜರಿದ್ದರು.  

ಈ ವೇಳೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು ಅತ್ಯಂತ ಧ್ವೇಷದ ಹಾಗೂ ಹಗೆಯ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ದೇಶವೇ ನಾವು ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ಬಯಸಿದೆ.  ನಮ್ಮದು ಒಂದೇ ರೀತಿಯಾದ ವಿಚಾರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಎಂದು ಈ ವೇಳೆ ಮಮತಾ ಹೇಳಿದ್ದಾರೆ.

Comments 0
Add Comment