ಆಂಧ್ರ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ತಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನ ಇಳಿಕೆ ಮಾಡಿದ್ದಾರೆ.
ಒಂದು ಕಡೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುತ್ತಿದ್ದರೆ, ಮತ್ತೊಂದೆಡೆ ರಾಜ್ಯ ಸರ್ಕಾರಗಳು ಇಳಿಕೆ ಮಾಡುತ್ತಿವೆ.
ಆಂಧ್ರ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡಿದ ಬೆನ್ನಲ್ಲಿ ಇದೀಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ತಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನ ಇಳಿಕೆ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 1 ರೂ. ಕಡಿತಗೊಳಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಸೋಮವಾರವಷ್ಟೇ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಡೀಸೆಲ್ ಹಾಗೂ ಪೆಟ್ರೋಲ್ ಪ್ರತಿ ಲೀಟರ್ ಗೆ 2 ರೂಪಾಯಿ ಇಳಿಸಿದ್ದರು. ಇನ್ನು ರಾಜಸ್ಥಾನದ ಮುಖ್ಯಮಂತ್ರಿ ವಸುಂದರಾ ರಾಜೆ ಸಹ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 2.5 ರೂ.ಗೆ ಇಳಿಕೆ ಮಾಡಿರುವುದನ್ನ ಇಲ್ಲಿ ಸ್ಮರಿಸಬಹುದು.
ಇನ್ನು ಕರ್ನಾಟಕ ವಿಷಯಕ್ಕೆ ಬಂದರೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನ ಇಳಿಕೆ ಮಾಡುತ್ತಾರಾ ಎನ್ನುವುದನ್ನ ಕಾದುನೋಡಬೇಕಿದೆ.
