ನೋಟು ನಿಷೇಧ ಕ್ರಮದ ಬಗ್ಗೆ ಸಚಿವ-ಸಂಪುಟಕ್ಕೆ ಜತೆ ಚರ್ಚಿಸಲಾಗಿದೆಯೋ ಇಲ್ಲವೋ ಗೊತ್ತಿಲ್ಲ. ಎಲ್ಲರನ್ನೂ ಜತೆ ಸೇರಿಸಿ, ಚರ್ಚಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಾನು ವಿನಂತಿಸುತ್ತಿದ್ದೇನೆ ಎಂದು ಮಾಧ್ಯಮದವರನ್ನು ಉದ್ದೇಶಿಸಿ ಮಮತಾ ಹೇಳಿದ್ದಾರೆ.
ಕೋಲ್ಕತ್ತಾ (ನ.21): ಕೇಂದ್ರ ಸರ್ಕಾರದ ಅಪಮೌಲ್ಯೀಕರಣಕ್ರಮದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾಳೆ ದೆಹಲಿಯ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ನೋಟು ನಿಷೇಧ ಕ್ರಮದ ಬಗ್ಗೆ ಸಚಿವ-ಸಂಪುಟಕ್ಕೆ ಜತೆ ಚರ್ಚಿಸಲಾಗಿದೆಯೋ ಇಲ್ಲವೋ ಗೊತ್ತಿಲ್ಲ. ಎಲ್ಲರನ್ನೂ ಜತೆ ಸೇರಿಸಿ, ಚರ್ಚಿಸಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ನಾನು ವಿನಂತಿಸುತ್ತಿದ್ದೇನೆ ಎಂದು ಮಾಧ್ಯಮದವರನ್ನು ಉದ್ದೇಶಿಸಿ ಮಮತಾ ಹೇಳಿದ್ದಾರೆ.
ಜನಸಾಮಾನ್ಯರ ಹಿತವನ್ನು ಕಾಪಾಡಬೇಕು. ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ, ಹಾಗೂ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದ್ದೇನೆ ಎಂದು ಮಮತಾ ಈ ಸಂದರ್ಭದಲ್ಲಿ ಹೇಳಿದ್ದಾರೆ.