ಸಾರ್ವಜನಿಕ ಪ್ರದೇಶದಲ್ಲಿ ಹಸ್ತ ಮೈಥುನ ಮಾಡಿಕೊಳ್ಳುತ್ತಿದ್ದ ಪ್ರಕರಣಗಳು ವರದಿಯಾಗುತ್ತಿದ್ದ ಸಂದರ್ಭದಲ್ಲಿಯೇ ಅಂಥದ್ದೆ ಮತ್ತೊಂದು ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈ[ಮೇ. 13] ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದ ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ ಮಹಿಳೆಗೆ ತನ್ನ ಮರ್ಮಾಂಗ ತೋರಿಸಿದ್ದಾನೆ. ದಿಟ್ಟತನ ಮೆರೆದಿರುವ ಮಹಿಳೆ ಆತನ ಕೃತ್ಯವನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾಕ್ಕೆ ಹಾಕಿದ್ದಾರೆ.

ಮುಂಬೈ ಹರಿ ಓಂ ನಗರದ ರಸ್ತೆಯಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಭಾನುವಾರ ಬೆಳಗಿನ ಜಾವ 3 ಕೃತ್ಯ ನಡೆದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮಹಿಳೆಯರು ಹಸ್ತಮೈಥುನ ಮಾಡಿಕೊಳ್ಳುವುದು ಹೇಗೆ ಎನ್ನುವ ವಿಡಿಯೋ ವೈರಲ್

ಥಾಣೆಯ ಕೊಪಾರಿ ಪ್ರದೇಶದಲ್ಲಿ 23 ವರ್ಷದ ಮಹಿಳೆ ಭಾನುವಾರ ಎಟಿಎಂಗೆ ಹಣ ತೆಗೆಯಲು ಹೋಗಿದ್ದಾಳೆ. ಮಹಿಳೆ ಹಿಂಬಾಲಿಸಿ ಬಂದವ ಅಶ್ಲೀಲವಾಗಿ ವರ್ತಿಸತೊಡಗಿದ್ದಾನೆ. ಆದರೆ ದಿಟ್ಟ ಮಹಿಳೆ ಆತನ ವಿಡಿಯೋ ಮಾಡಿದ್ದಾಳೆ. ತಕ್ಷಣ ಕ್ರಮ ತೆಗೆದುಕೊಂಡ ಪೊಲೀಸರು ಆರೋಪಿ ಸಂದೀಪ್ ಕುಂಭಕರ್ಣ(38)ನನ್ನು ಬಂಧಿಸಿದ್ದಾರೆ.

View post on Instagram