ಖಾನಾಪುರ: ನವ ವಿವಾಹಿತೆಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಅದರ ವಿಡಿಯೋ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಆ ವಿಡಿಯೋವನ್ನು ವೈರಲ್‌ ಮಾಡಿದ ಆರೋಪದಡಿ ಯುವಕನೋರ್ವನನ್ನು ಖಾನಾಪುರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ಉತ್ತರ ಕನ್ನಡ ಜಿಲ್ಲೆ ಜೋಯಿಡಾ ತಾಲೂಕು ರಾಮನಗರ ಗ್ರಾಮದ ಅಜೀತ ದೇಸಾಯಿ (25) ಬಂಧಿತ ಆರೋಪಿ. 

ಜೋಯಿಡಾ ತಾಲೂಕಿನ ಕಾಮತಗಾ ಗ್ರಾಮದ ಮಹಿಳೆ ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಪಟ್ಟಣದ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.