ಏಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಸ್ಥಳೀಯರು ಪ್ರಶ್ನಿಸಿದರೆ ಅವರ ಮೇಲೂ ಎಗರಾಡಿದ್ದಾರೆ.
ಬೆಂಗಳೂರು(ಮೇ.22): ಬೆಂಗಳೂರಿನಲ್ಲಿ ಕನ್ನಡ ಸಂಘಟನೆ ಕಾರ್ಯಕರ್ತನ ಮೇಲೆ ನೈಜಿರಿಯಾ ಮೂಲದವರು ಹಲ್ಲೆ ಮಾಡಿದ ಘಟನೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜಕ್ಕೂರು ಲೇಔಟ್ ಬಳಿ ನಡೆದಿದೆ.
ನಿಂತಿದ್ದ ಕಾರಿಗೆ ನೈಜಿರಿಯಾ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಈ ಕುರಿತು ನೈಜಿರಿಯಾ ಮೂಲದ ಚಾಲಕನನ್ನು ಕಾರು ಚಾಲಕ ಪ್ರಶ್ನಿಸಿದ್ದಾನೆ. ಇದಕ್ಕೆ ನೈಜಿರಿಯಾ ಮೂಲದವರು ಗೂಂಡಾ ವರ್ತನೆ ತೋರಿದ್ದಾರೆ. ಏಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಸ್ಥಳೀಯರು ಪ್ರಶ್ನಿಸಿದರೆ ಅವರ ಮೇಲೂ ಎಗರಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕನ್ನಡಪರ ಸಂಘಟನೆ ಕಾರ್ಯಕರ್ತ
ಘಟನೆ ಕುರಿತು ಪ್ರಶ್ನಿಸಿದಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರ ದಾಖಲಾಗಿದೆ.
