ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು (ಜ.22): ಸ್ನೇಹಿತರ ಜೊತೆ ಪಾರ್ಟಿ ಮಾಡಿದ ಯುವಕ ಮದ್ಯದ ಅಮಲಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸಾದರ ಮಂಗಲ ಸ್ಲಂ ಬೋರ್ಡ್’ನಲ್ಲಿ ಬೈಯಪ್ಪನಹಳ್ಳಿ ನಿವಾಸಿಯಾದ 22 ವರ್ಷದ ರಾಜಶೇಖರ್ ಎಂಬ ಯುವಕ ಸಾವಿಗೀಡಾಗಿದ್ದಾನೆ.

ಇಂದು ಬೆಳಗ್ಗೆ ಚೆನ್ನೈಗೆ ತೆರಳಬೇಕಾದ ಹಿನ್ನೆಲೆಯಲ್ಲಿ ರಾಜಶೇಖರ್ ನಿನ್ನೆ ರಾತ್ರಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದು, ಸ್ನೇಹಿತರು ವಾಪಸ್ ತೆರಳಿದ ಮೇಲೆ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಕಾಡುಗೋಡಿ ಪೊಲೀಸರು ಸ್ಥಳಕ್ಕಾಗಮಿಸಿದಾಗ ಕಟ್ಟಡದ ಮೇಲೆ ಆತನ ಚಪ್ಪಲಿ ಹಾಗೂ ಇತರೆ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಸದ್ಯ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.