ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೃತಪಟ್ಟ ಯುವಕ

ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ವ್ಯಕ್ತಿ ಮೃತಪಟ್ಟ ಘಟನೆ ಹಾವೇರಿ ಜೆಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದಿದೆ. ಅರುಣ ಮಡಿವಾಳರ (39) ಮೃತನು. ಮಾಸೂರಿನಲ್ಲಿ ಇಂದು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹಿರಿಯ ಕೊಂಬು ತಿವಿತದಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಿಷೇಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆಯನ್ನು ಹಿರೇಕೆರೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ರೀತಿಯಲ್ಲಿ ಜಲ್ಲಿಕಟ್ಟು ಎಂಬ ಹೆಸರಿನಲ್ಲಿ ತಮಿಳುನಾಡಿನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಕೆಲವು ಸ್ವಯಂಸೇವಾ ಸಂಘಟನೆಗಳ ಕೋರ್ಟ್ ಮೊರೆ ಹೋದ ಕಾರಣ ನಿಷೇಧಿಸಲಾಗಿತ್ತು. ನಂತರ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡ ಕಾರಣ ಕೇಂದ್ರ ನಿಷೇಧವನ್ನು ತೆರವುಗೊಳಿಸಿತ್ತು.