ಹಸು ಕದಿಯಲು ಹೋಗಿ ವ್ಯಕ್ತಿ ಅನುಮಾನಾಸ್ಪದ ಸಾವು | ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಈ ಘಟನೆ ನಡೆದಿದೆ 

ಹಾಸನ (ಜೂ. 24): ಹಸು ಕದಿಯಲು ಹೋಗಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿಯಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗೋವಿಂದಪ್ಪ(55 ) ಮೃತ ವ್ಯಕ್ತಿ. ಹಸುವನ್ನು ಕದ್ದು ಸಾಗಿಸುವ ವೇಳೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕದ್ದ ಹಸುವನ್ನ ವಾಹನಕ್ಕೆ ತುಂಬಿಸುವ ವೇಳೆ ಗೋವಿಂದಪ್ಪನ ಮರ್ಮಾಂಗಕ್ಕೆ ಹಸು ಒದ್ದಿದೆ. ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿರೊ ಶಂಕೆ ವ್ಯಕ್ತವಾಗಿದೆ. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮೃತನ‌ ಶವ ಪತ್ತೆಯಾಗಿದೆ. ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.