ರಾಷ್ಟ್ರಪತಿ ಭವನದ ಆವರಣದಲ್ಲಿ ಕೊಳೆತ ಶವ ಪತ್ತೆ..!

Man's Body In Locked Room At Rashtrapati Bhavan
Highlights

ರಾಷ್ಟ್ರಪತಿ ಭವನದ ಆವರಣದಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ

ಸಿಬ್ಬಂದಿ ವಸತಿ ಗೃಹದಲ್ಲಿ ತ್ರಿಲೋಕ್ ಚಂದ್ ಮೃತದೇಹ

ಕಳೆದ ನಾಲ್ಕು ದಿನಗಳ ಹಿಂದಯೇ ಮೃತಪಟ್ಟಿರುವ ಶಂಕೆ

ಹೃದಯಾಘಾತ ಸಂಭವಿಸಿರಬಹುದಾದ ಸಾಧ್ಯತೆ

ನವದೆಹಲಿ(ಜೂ.8): ರಾಷ್ಟ್ರಪತಿ ಭವನದ ಆವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ದೊರೆತಿದೆ. ರಾಷ್ಟ್ರಪತಿ ಭವನದ ಆವರಣದಲ್ಲಿರುವ ಸಿಬ್ಬಂದಿ ವಸತಿ ಗೃಹದ ಪಕ್ಕ ಶವ ದೊರೆತಿದ್ದು, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತ್ರಿಲೋಕ್ ಚಂದ್ ಎಂಬುವವರು ಕಳೆದ ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಕೊಳೆತ ಸ್ಥಿತಿಯಲ್ಲಿದ್ದ ಅವರ ಶವವನ್ನು ವಸತಿ ಗೃಹದ ಸಿಬ್ಬಂದಿ ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತ್ರಿಲೋಕ್ ಚಂದ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮೃತಪಟ್ಟ ಬಗ್ಗೆ ಯಾರಿಗೂ ಮಾಹಿತಿಯೇ ಇರಲಿಲ್ಲ ಎಂಬುದು ಆಶ್ಚರ್ಯ ತರುವ ಸಂಗತಿ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ತ್ರಿಲೋಕ್ ಚಂದ್ ಸಾವು ಹೇಗೆ ಸಂಭವಿಸಿದೆ ಎಂಬುದು ಇನ್ನೂ ಖಚಿತವಾಗಿಲ್ಲ. ಬಹುಶಃ ಹೃದಯಾಘಾತದಿಂದ ಅವರು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

loader